ಅಮೆರಿಕ: ಇರಾನ್ ಮೇಲೆ ರಾತ್ರಿ ನಡೆಸಿದ ದಾಳಿಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನಾಡಿದ್ದಾರೆ. ಇರಾನ್‌ನ ಪರಮಾಣು ಸ್ಥಾವರಗಳ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿ ಯಶಸ್ವಿಯಾಗಿದೆ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ನಿಲ್ಲಿಸುವುದು ನಮ್ಮ ಗುರಿಯಾಗಿತ್ತು ಎಂದ ಅವರು, “ಜಗತ್ತಿನ ನಂಬರ್ ಒನ್ ಭಯೋತ್ಪಾದಕ ರಾಷ್ಟ್ರವು ಪರಮಾಣು ಬಾಂಬ್ ತಯಾರಿಸುವುದನ್ನು ತಡೆಯುವುದು ಮುಖ್ಯವಾಗಿತ್ತು” ಎಂದಿದ್ದಾರೆ.
ತಡರಾತ್ರಿ ಇರಾನ್‌ನ ಮೂರು ಪರಮಾಣು ತಾಣಗಳಾದ ಫೋರ್ಡೋ, ನಟಾಂಜ್, ಎಸ್ಪಹಾನ್ ಮೇಲೆ ಅಮೆರಿಕ ದಾಳಿ ಮಾಡಿದೆ. ಇತ್ತ ಇರಾನ್ ‘ನೀವು ಪ್ರಾರಂಭಿಸಿದ್ದೀರಿ, ಅದನ್ನು ನಾವು ಕೊನೆಗೊಳಿಸುತ್ತೇವೆ’ ಎಂದು ಅಮೆರಿಕಕ್ಕೆ ಎಚ್ಚರಿಕೆ ಸಂದೇಶ ರವಾನೆ ಮಾಡಿದೆ.