ಬೆಳ್ತಂಗಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ : ಚಾಲಕ ಸಾ*ವು 

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಗಂ*ಭೀರವಾಗಿ ಗಾಯಗೊಂಡಿದ್ದ ಚಾಲಕ ಮೃತಪಟ್ಟಿರುವ ಘಟನೆ ಬೆಳ್ತಂಗಡಿಯ ಬದ್ಯಾ‌ರ್ ಸಮೀಪ ರವಿವಾರ ಸಂಭವಿಸಿದೆ. ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಮೃತಪಟ್ಟವರು.
ಗುರುವಾಯನಕೆರೆಯಿಂದ ಅಳದಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಶಿವಾನಂದ ಅವರನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವ  ವೇಳೆಯೇ ಮೃತಪಟ್ಟಿದ್ದರು.
ಸಹಪ್ರಯಾಣಿಕ ಶಿವರಾಜ್ ಗಾಯಗೊಂಡಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
error: Content is protected !!