ಬೆಂಗಳೂರು ಮೂಲದ ಯುವಕ ಮತ್ತು ಯುವತಿ ನೆಲ್ಯಾಡಿಯಲ್ಲಿ ಆತ್ಮಹತ್ಯೆಗೆ ಯತ್ನ

ಪುತ್ತೂರು: ಬೆಂಗಳೂರು ಮೂಲದ ಜೋಡಿ ನೆಲ್ಯಾಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಒದ್ದಾಡುತ್ತಿದ್ದ ವೇಳೆ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆತಂದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.

ಈ ಜೋಡಿ ಮೂಲತಃ ಯಲಹಂಕದವರಾಗಿದ್ದು ಶ್ರೀಶಾ ಮತ್ತು ಪ್ರಜ್ವಲ ಎಂದು ಗುರುತಿಸಲಾಗಿದೆ. ನೆಲ್ಯಾಡಿ ಬಳಿ ವಿಷ ಸೇವಿಸಿ ಒದ್ದಾಡುತ್ತಿದ್ದ ಅವರನ್ನು ಗಮನಿಸಿದ ಸ್ಥಳೀಯರು ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಕರೆತಂದಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿಸಲಾಗಿದೆ.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj

error: Content is protected !!