“ಧರ್ಮಸ್ಥಳದ ಮಾಹಿತಿ ಹೊಂದಿರುವ ವ್ಯಕ್ತಿ ಶರಣಾದಲ್ಲಿ ಭದ್ರತೆ“ -ದ.ಕ. ಎಸ್ಪಿ ಸ್ಪಷ್ಟನೆ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಮಾಹಿತಿ ಹೊಂದಿರುವುದಾಗಿ ಬೆಂಗಳೂರಿನ ಇಬ್ಬರು ನ್ಯಾಯವಾದಿಗಳು ಬರೆದಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಈ ಕುರಿತು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.


ಎಸ್‌ಪಿ ಹೇಳಿದ್ದೇನು?
ವೈರಲ್ ಪತ್ರದ ನೈಜತೆಯನ್ನು ಪರಿಶೀಲಿಸುವ ಸಲುವಾಗಿ, ಈ ಪತ್ರದಲ್ಲಿ ನಮೂದಿಸಲಾಗಿದ್ದ ಬೆಂಗಳೂರಿನ ವಕೀಲರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಪರ್ಕಿಸಿದಾಗ, ವಕೀಲರು ವ್ಯಕ್ತಿಯೋರ್ವ ತನ್ನ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ದವಿರುವುದಾಗಿ ತಿಳಿಸಿದ್ದಾರೆ. ಆ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ, ಆ ಬಳಿಕ ಆತನನ್ನು ಹಾಜರುಪಡಿಸುವುದಾಗಿ ವಕೀಲರು ತಿಳಿಸಿದ್ದಾರೆ. ಅದರಂತೆ ಆ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳ ಪೊಲೀಸರು ಈ ಪತ್ರದ ನೈಜತೆಯನ್ನು ಪರಿಶೀಲಿಸಲು ಅದರಲ್ಲಿ ಪತ್ರದಲ್ಲಿ ಉಲ್ಲೇಖಿಸಿದ್ದ ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಎಂಬವರನ್ನು ಸಂಪರ್ಕಿಸಿ ಮಾಹಿತಿ ಕಲೆ ಹಾಕಿದ್ದಾರೆ ಎಂಬ ಮಾಹಿತಿಯನ್ನು ಎಸ್‌ಪಿ ನೀಡಿದ್ದಾರೆ.

error: Content is protected !!