ಕಾರಿನಲ್ಲಿ ಸಂಚರಿಸುತ್ತಿದ್ದ ಕುಟುಂಬದ ಮೇಲೆ ಹಲ್ಲೆ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಚಾಲಕ, ಗನ್ ಮ್ಯಾನ್ ವಿರುದ್ಧ ಎಫ್ ಐ ಆರ್!

ಬೆಂಗಳೂರು: ಬೆಂಗಳೂರು ಹೊರವಲಯದ ನೆಲಮಂಗಲ ಹಳೇ ನಿಜಗಲ್ ಬಳಿ ಕಾರ್ ಗೆ ಸೈಡ್ ಕೊಡುವ ವಿಚಾರಕ್ಕೆ ಸಂಬಂಧಿಸಿ ಕಾರಿನಲ್ಲಿದ್ದ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ, ಕಾರು ಚಾಲಕ ಹಾಗೂ ಗನ್​ಮ್ಯಾನ್ ಮೇಲೆ ಎಫ್​ ಐಆರ್ ದಾಖಲಾಗಿದೆ. ಅನಂತ ಕುಮಾರ್ ಹೆಗಡೆ ಪುತ್ರ ಅಶುತೋಷ್, ಗನ್‌ ಮ್ಯಾನ್‌ ಶ್ರೀಧರ್, ಚಾಲಕ ಮಹೇಶ್ ವಿರುದ್ಧ ಹಲ್ಲೆ ದೂರು ದಾಖಲಾಗಿದೆ.
ಇನ್ನೊಂದು ಕಾರಿನಲ್ಲಿದ್ದ ಸಲ್ಮಾನ್, ಸೈಫ್‌, ಇಲಿಯಾಸ್ ಖಾನ್‌ ಹಾಗೂ ಉನ್ನೀಸಾ ಎಂಬವರ ಮೇಲೆ ಹಲ್ಲೆ ನಡೆದಿದ್ದು ದಾಬಸ್‌ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಪೊಲೀಸ್​ ಠಾಣೆ ಬಳಿ ಜನರು ಜಮಯಿಸಿದ್ದು ಉದ್ರಿಕ್ತ ವಾತಾವರಣ ಸೃಷ್ಟಿಯಾಗಿತ್ತು.

error: Content is protected !!