ಹಳೆಯಂಗಡಿ: ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಳೆಯಂಗಡಿಯಿಂದ ಪಕ್ಷಿಕೆರೆಗೆ ಹಾದು ಹೋಗುವ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿದ್ದು, ಶೀಘ್ರ ದುರಸ್ತಿಗೊಳಿಸಿ ಸಾರ್ವಜನಿಕರ ಹಿತಕಾಯಬೇಕೆಂದು ಎಸ್.ಡಿ.ಪಿ.ಐ. ಸಮಿತಿಯ ನಿಯೋಗವು ಹಳೆಯಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಹಳೆಯಂಗಡಿ-ಪಕ್ಷಿಕೆರೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಹೋಗಿದೆ. ಈ ರಸ್ತೆಯಲ್ಲಿ ದಿನನಿತ್ಯದ ವಾಹನ ಸಂಚಾರ ಅಪಾಯಕಾರಿಯಾಗಿದ್ದು ಈ ಬಗ್ಗೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಮನವಿ ಮಾಡಿತು.
ಈ ರಸ್ತೆಗಳಲ್ಲಿ ಮುಂಬರುವ ದಿನಗಳಲ್ಲಿ ಸಂಭವಿಸಬಹುದಾದಂತಹ ಅಪಘಾತವನ್ನು ತಪ್ಪಿಸಲು ಮತ್ತು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಬೇಕು. ರಸ್ತೆ ಬದಿಯ ಹೊಂಡದಲ್ಲಿ ನಿಂತ ನೀರಿನಿಂದ ಜನರು ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆಯಿದೆ ಎಂದು ಮನವಿ ಮಾಡಿಕೊಂಡರು. ಮನವಿಗೆ ಸ್ಪಂದಿಸಿದ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ರಸ್ತೆಯನ್ನು ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ನಿಯೋಗದಲ್ಲಿ ಎಸ್.ಡಿ.ಪಿ.ಐ. ಮುಲ್ಕಿ ಹಾಗೂ ಮೂಡುಬಿದಿರೆ ಕ್ಷೇತ್ರದ ಅಧ್ಯಕ್ಷರಾದ ಇರ್ಷಾದ್ ಹಳೆಯಂಗಡಿ, ಶಂಶೀರ್ ಬೊಳ್ಳೂರು, ಇಕ್ಬಾಲ್ ಬೊಳ್ಳೂರು, ಮುಹ್ಸಿನ್ ಕದಿಕೆ ಮತ್ತು ಮುಹಮ್ಮದ್ ಅಝೀಂ ಬೊಳ್ಳೂರು ಇದ್ದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝