ಬೆಂಗಳೂರು: ಸಾಂಬಾರಿಗಾಗಿ ಸ್ನೇಹಿತರಲ್ಲೇ ಜಗಳ ಉಂಟಾಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬೆಂಗಳೂರಿನ ತಲಘಟ್ಟಪುರದಲ್ಲಿ ಭಾನುವಾರ ತಡರಾತ್ರಿ ಘಟನೆ ಸಂಭವಿಸಿದೆ.
ನೇಪಾಳ ಮೂಲದ ಬಹದ್ದೂರ್ ಕೊಲೆಯಾದವನು. ಇವನ ಸ್ನೇಹಿತ ಮಹೇಂದ್ರ ಕೊಲೆ ಮಾಡಿದ ಆರೋಪಿ. ಕೊಲೆಯಾದ ಬಹದ್ದೂರ್ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದನು.
ಭಾನುವಾರ ರಾತ್ರಿ ರೂಮಿನಲ್ಲಿ ಬಹದ್ದೂರ್ ಮತ್ತು ಮಹೇಂದ್ರ ನಡುವೆ ಸಾಂಬಾರ್ ವಿಚಾರದಲ್ಲಿ ಉಂಟಾಗಿದೆ. ಗಲಾಟೆ ತಾರಕಕ್ಕೇರಿದ್ದು ಬಹದ್ದೂರ್ ಮೇಲೆ ಮಹೇಂದ್ರ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಹೊಡೆತ ಬಲವಾಗಿದ್ದರಿಂದ ಬಹದ್ದೂರು ಕೊಲೆಯಾಗಿ ಹೋಗಿದ್ದಾನೆ.
ಘಟನಾ ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝