ಸುರತ್ಕಲ್: ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆದಿದ್ದು, 2025-27 ರ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸರೋಜಾ ಟಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ವರಿ ಡಿ ಶೆಟ್ಟಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಜಯಂತಿ ಪಿ ಟಿ ರೈ, ಕೋಶಾಧಿಕಾರಿಯಾಗಿ ಮಾಲತಿ ಜೆ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಕವಿತಾ ಪಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಆಶಾ ಕಿರಣ್ ರೈ, ಕ್ರೀಡಾ ಕಾರ್ಯದರ್ಶಿಯಾಗಿ ಬಬಿತ ಜೆ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ದೀಪಾ ಕೆ ಶೆಟ್ಟಿ ಆಯ್ಕೆಯಾಗಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj