ಬಾಗಲಕೋಟೆ: ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಸಾವಿರ ಕೋಟಿ ಪ್ರಾಜೆಕ್ಟ್ ಬೇಕಾದ್ರೂ ಆಗಿರಲಿ. ಪ್ರಸ್ತಾವನೆ ಸಿದ್ಧ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೀಡಿರುವ ಹೇಳಿಕೆ ಇದೀಗ ರಾಜ್ಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ.
ಅಷ್ಟಕ್ಕೂ ನಡೆದಿದ್ದೇನು?
ಬಾದಾಮಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮವೊಂದದಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಅದು ಸಾವಿರ ಕೋಟಿ ಪ್ರಾಜೆಕ್ಟ್ ಆಗಿರಲಿ. ಪ್ರಸ್ತಾವನೆ ಸಿದ್ಧ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲದೇ ನಮ್ಮ ಬಳಿ ಇರುವ ದುಡ್ಡಿನಲ್ಲಿ ನಿಮಗೆ ಈಗಾಗಲೇ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.
ವಸತಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆರೋಪ ಮಾಡಿದ್ದರೆ, ಮತ್ತೊಂದೆಡೆ ಅನುದಾನ ವಿಚಾರವಾಗಿ ಶಾಸಕ ರಾಜು ಕಾಗೆ ಅಸಮಧಾನ ವ್ಯಕ್ತಪಡಿಸಿದ್ದರು.. ಅದರ ಬೆನ್ನೆಲ್ಲೇ ಈಗ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ. ಗ್ಯಾರಂಟಿ ಯೋಜನೆ ಜಾರಿ ಮಾಡಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ಪದೇ ಪದೇ ಸ್ವಪಕ್ಷದ ಶಾಸಕರು, ಸಚಿವರೇ ಅಸಮಾಧಾನದ ಹೇಳಿಕೆಗಳ ಮೂಲಕ ತೀವ್ರ ಮುಜುಗರ ಎದುರಿಸುತ್ತಿದೆ. ವಿರೋಧ ಪಕ್ಷಗಳಿಗಿಂತ ಸ್ವಪಕ್ಷದವರೇ ಕಾಂಗ್ರೆಸ್‌ಗೆ ಮುಳುವಾಗಿದ್ದು ಹೊಸದಾಗಿ ಈಗ ಪರಮೇಶ್ವರ್ ಸೇರ್ಪಡೆಯಾಗಿದ್ದಾರೆ.
(ಕೃಪೆ: ಪಬ್ಲಿಕ್ ನ್ಯೂಸ್)
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝