ಮಂಗಳೂರು: ಬಿಕಾಂ, ಎಲ್.ಎಲ್.ಬಿ. ಮುಗಿಸಿ ಇದೀಗ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿರುವ ಗದಗ ಜಿಲ್ಲೆಯ ನರಗುಂದ ತಾಲೂಕಿನ ನಿವಾಸಿ, ವಿಕಲಚೇತನ ಶಿವಾನಂದ ಇ. ಸುಂಕದ ಅವರು ತನ್ನ ಶಿಕ್ಷಣಕ್ಕೆ ಆರ್ಥಿಕ ನೆರವು ಒದಗಿಸಿದ್ದ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೆಂದ್ರ ಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಶಿವಾನಂದ ಇ ಸುಂಕದ ಅವರು ಮಂಗಳವಾರ ಗದಗದಿಂದ ಮಂಗಳೂರಿಗೆ ಆಗಮಿಸಿ ಡಾ. ಎಂ.ಎನ್. ರಾಜೆಂದ್ರ ಕುಮಾರ್ ಅವರನ್ನು ಭೇಟಿಯಾಗಿ ಅವರಿಗೆ ಹೂವು ಮತ್ತು ಸ್ಮರಣಿಕೆಯನ್ನು ಅರ್ಪಿಸಿ ಗೌರವ ಸೂಚಕ ಕೃತಜ್ಞತೆ ಸಲ್ಲಿಸಿದರು.
ಗೌರವವನ್ನು ಸ್ವೀಕರಿಸಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಕೆಎಎಸ್ ಪರೀಕ್ಷೆ ಬರೆಯುವ ಶಿವಾನಂದ ಇ. ಸುಂಕದ ಅವರ ಮುಂದಿನ ಭವಿಷ್ಯಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕ ಶಸಿ ಕುಮಾರ್ ರೈ ಬಾಲ್ಯೊಟ್ಟು, ಮಾಜಿ ನಿರ್ದೇಶಕ ರಾಜು ಪೂಜಾರಿ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝