ಕಾರವಾರ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಬೆಂಗಳೂರಿನಿಂದ 25 ಪ್ರಯಾಣಿಕರನ್ನು ಗೋವಾದ ಕಡೆ ಕರೆದೊಯ್ಯುತ್ತಿದ್ದ ಬಸ್ ಅರೆಬೈಲ್ ಘಟ್ಟದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಲಾರಿಗೆ ಗುದ್ದಿ ಪಲ್ಟಿಯಾಗಿದೆ. ಈ ವೇಳೆ ಬಸ್ ಪ್ರಪಾತಕ್ಕೆ ಬೀಳದೆ 25 ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj