ಸುಳ್ಯ: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡಿನ ಕೊಡಂಕೇರಿ ಎಂಬಲ್ಲಿ ನಿನ್ನೆ ಸಂಜೆ ಕೆಎಸ್‌ಆರ್‌ಟಿಸಿ ಬಸ್‌ಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವಳು ಮೃತಪಟ್ಟಿದ್ದು 20 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಶಾಲನಗರ ಮೂಲದ ಭಾರತಿ ( 50 ) ಮೃತ ದುರ್ದೈವಿ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಡಿಕೇರಿ ಕಡೆಯಿಂದ – ಸುಳ್ಯ ಮಾರ್ಗವಾಗಿ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮಧ್ಯೆ ಸಂಭವಿಸಿ ಈ ಅಪಘಾತವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಯಗೊಂಡ 20ಕ್ಕೂ ಅಧಿಕಮಂದಿಯನ್ನು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಹಾಗೂ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. . ಮಡಿಕೇರಿ ಮೂಲದ ಚೈತ್ರಾ ಸಹಿತ ಗಂಭೀರ ಗಾಯಗೊಂಡ ಹಲವರು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ತುತ್ತಾಗಿ ಬಸ್‌ನಲ್ಲಿ ಒದ್ದಾಡುತ್ತಿದ್ದ ಗಾಯಾಳುಗಳನ್ನು ಸ್ಥಳೀಯರೇ ರಕ್ಷಿಸಿ ಆಂಬ್ಯುಲೆನ್ಸ್, ರಿಕ್ಷಾ ಗಳ ಮೂಲಕ ಸುಳ್ಯ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝