ಸಕಲೇಶಪುರ: ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡ ಕುಸಿತವಾಗಿದ್ದು ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ತಾತ್ಕಲಿಕವಾಗಿ ನಿಲ್ಲಿಸಲಾಗಿದೆ.
ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿಯ ಶಿರಾಡಿ ಘಾಟ್ ರಸ್ತೆ ಬಳಿ ಗುಡ್ಡ ಕುಸಿದ ಕಾರಣ ಬೆಂಗಳೂರು-ಮಂಗಳೂರು ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದ ಕಾರಣ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ.
ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸಬೇಕು. ಮಂಗಳೂರು ಕಡೆಯಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸಂಪಾಜೆ ಘಾಟ್ ಬಳಸುವಂತೆ ಹಾಸನ ಡಿಸಿ ಕೆ.ಎಸ್.ಲತಾಕುಮಾರಿ ಆದೇಶವನ್ನು ಹೊರಡಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj