18 ಮಂದಿ ಪ್ರಯಾಣಿಕರಿದ್ದ ಬಸ್‌ “ಅಲಕಾನಂದ ನದಿ” ಪಾಲು – ಇಬ್ಬರು ಸಾವು, 10 ಮಂದಿ ನಾಪತ್ತೆ

ಡೆಹ್ರಾಡೂನ್: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕಾನಂದ ನದಿಗೆ 18 ಪ್ರಯಾಣಿಕರಿದ್ದ ಬಸ್‌ ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 10 ಮಂದಿ ನಾಪತ್ತೆಯಾಗಿದ್ದಾರೆ.

ಏಳು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ನಾಪತ್ತೆಯಾದವರ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ.

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಸ್ಸು ಬಿದ್ದಿದೆ. ಕೆಲವು ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರಿಂದ ಸಾವು-ನೋವಿನಿಂದ ಪಾರಾಗಿದ್ದಾರೆ.

ಪೊಲೀಸ್, ಜಿಲ್ಲಾಡಳಿತ ಆಡಳಿತ ಮತ್ತು ವಿಪತ್ತು ನಿರ್ವಹಣಾ ವಿಭಾಗದ ಉನ್ನತ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj

 

 

error: Content is protected !!