ದಾವಣಗೆರೆ: ಚಿಕ್ಕಮಗಳೂರು, ತರೀಕೆರೆ, ಹೊಸದುರ್ಗ ತಾಲೂಕಿನ ಗ್ರಾಮಗಳಿಗೆ ಮಧ್ಯ ಕರ್ನಾಟಕ ಭಾಗದ ಜನರ ಜೀವನಾಡಿ ಭದ್ರಾ ಅಣೆಕಟ್ಟು ಬಲದಂಡೆ ಸೀಳಿ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿಯ ಒಳಜಗಳ ಬಹಿರಂಗಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 4ನ್ನು ಅಡ್ಡಗಟ್ಟಿ ದಾವಣಗೆರೆ ಜಿಲ್ಲಾ ಬಿಜೆಪಿ ಬಣ ರೈತ ಪರ ಹೋರಾಟದ ವೇಳೆ ಇದು ಬಹಿರಂಗಗೊಂಡಿದೆ.
ಮೊನ್ನೆ ಕಾಮಗಾರಿ ನಡೆಯುವ ಸ್ಥಳಕ್ಕೆ ತೆರಳಿ ಎಂ.ಪಿ.ರೇಣುಕಾಚಾರ್ಯ ಹಾಗೂ ಅವರ ತಂಡ ಪ್ರತಿಭಟನೆ ನಡೆಸಿದ್ರೆ, ಇತ್ತ ದಾವಣಗೆರೆ ಡಿಸಿ ಕಚೇರಿಗೆ ತೆರಳಿ ಜಿ.ಎಂ.ಸಿದ್ದೇಶ್ವರ, ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ತಂಡ ಮನವಿ ಮಾಡಿದೆ.
ರಾಷ್ಟ್ರೀಯ ಹೆದ್ದಾರಿ ತಡೆದು ನಡೆದ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಎಂ.ಪಿ.ರೇಣುಕಾಚಾರ್ಯ ತಮ್ಮ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರು ಒಗ್ಗೂಡಿ ಹೋರಾಡಬಹುದಿತ್ತಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ರೇಣುಕಾಚಾರ್ಯ, ʼಇಲ್ಲಿ ಪಕ್ಷ ಇಲ್ಲ, ನಾವು ರೈತರು, ನಾವು ಪ್ರ್ಯಾಕ್ಟಿಕಲ್ ಹೋರಾಟಗಾರರು, ವೈಟ್ ಕಾಲರ್ ಅಲ್ಲ, ಸ್ಥಳವೇ ಗೊತ್ತಿಲ್ಲ ಇವರಿಗೆ, ನಾಟಕ ಮಾಡಲು ಮೊನ್ನೆ ಡಿಸಿ ಕಚೇರಿಗೆ ಮನವಿ ಕೊಡುತ್ತಾರೆ. ನೀವು ನೀರನ್ನು ಚಿತ್ರದುರ್ಗಕ್ಕೆ ಒಯ್ಯಲು ಬಯಸುತ್ತೀರಾ? ʼ ಎಂದು ಪ್ರಶ್ನಿಸಿದ್ದಾರೆ.
ನಾನು ರೈತ ಒಕ್ಕೂಟ ಬಗ್ಗೆ ಮಾತನಾಡಲು ಇಚ್ಚೆ ಪಡಲ್ಲ. ನೀವು ಸ್ಥಳಕ್ಕೆ ಭೇಟಿ ಕೊಟ್ಟಿದ್ದೀರಾ? ನಿಮಗೆ ಕ್ಷೇತ್ರದಲ್ಲಿ ಜನ ಛೂ ತೂ ಅಂತಾರೆ ಅಂತಾ ಫೋಟೋ ಶೂಟ್‌ಗೆ ಅಷ್ಟೇ ಡಿಸಿ ಬಳಿ ಹೋಗಿ ಮನವಿ ಕೊಡ್ತೀರಿ. ಒಬ್ಬರಾದರೂ ಹಸಿರು ಶಾಲು ಹಾಕಿಕೊಂಡಿದ್ದಾರಾ? ಅವರೆಲ್ಲಾ ವೈಟ್ ಕಾಲರ್ಸ್. ಚಿತ್ರದುರ್ಗಕ್ಕೆ ನೀರು ಒಯ್ಯಬೇಕು ಅಂತಾ ಕುತಂತ್ರ ಇದೆ. ಅವರೆಲ್ಲಾ ಪೇಪರ್ ಟೈಗರ್ಸ್. ತಾಕತ್ ಇದ್ರೆ ಹೋರಾಟಕ್ಕೆ ಬರಬೇಕಾಗಿತ್ತು. ನಾವು ಹೋರಾಟ ಮಾಡಿ ರಾಜ್ಯ ಕಾಂಗ್ರೆಸ್‌ಗೆ ಪಾಠ ಕಲಿಸುತ್ತೇವೆ’ ಎಂದು ತಿಳಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj