ಮಂಗಳೂರು: ನಗರದ ಕೊಡಿಯಾಲ್ ಬೈಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಪರಸ್ಪರ ಹೊಡೆದಾಟ ನಡೆದಿರುವ ಬಗ್ಗೆ ವರದಿಯಾಗಿದೆ. ಉಳ್ಳಾಲದ ನಟೋರಿಯಸ್ ರೌಡಿ ಮುಖ್ತಾರ್ ಹಾಗೂ ಇತರೆ ಕೈದಿಗಳ ಮಧ್ಯೆ ಗಲಾಟೆಯಾಗಿ ಹೊಡೆದಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ರೌಡಿ ಮುಖ್ತಾರ್ ಇನ್ನೋರ್ವ ಕೈದಿ ಕೇಶವ ಎಂಬಾತನ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾನೆ. ಗಾಯಾಳಯ ಕೇಶವನನ್ನು ವೆನ್ಲಾಕ್ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.
2023ರ ನ.6ರಂದು ನಡೆದಿದ್ದ ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಯಾಗಿರುವ ಕೇಶವ ಜೈಲಿವಾಸ ಅನುಭವಿಸುತ್ತಿದ್ದಾನೆ. ಉಳ್ಳಾಲ ಧರ್ಮನಗರ ನಿವಾಸಿಯಾಗಿರುವ ಆರೋಪಿ ಮಹಮದ್ ಮುಖ್ತಾರ್ 15 ಪ್ರಕರಣಗಳಲ್ಲಿ ಆರೋಪಿಯಾಗಿದ್ದು, 2022ರ ಜುಲೈನಲ್ಲಿ ಈತನ ಕಾಲಿಗೆ ಗುಂಡಿಕ್ಕಿ ಬಂಧನ ಮಾಡಲಾಗಿತ್ತು. ಜೈಲಿಗೆ ಬರ್ಕೆ ಠಾಣೆ ಪೊಲೀಸರು ಹಾಗೂ ಎಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲವು ತಿಂಗಳಿನಿಂದ ಹಲವು ಬಾರಿ ಕೈದಿಗಳ ನಡುವಿನ ಸಂಘರ್ಷ ನಡೆದಿಯುತ್ತಿರುವುದರಿಂದ ಇಲ್ಲಿನ ಭದ್ರತೆ ಮತ್ತು ವ್ಯವಸ್ಥೆಯ ಬಗ್ಗೆ ಅನುಮಾನ ಮೂಡಲಾರಂಭಿಸಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝