ಕುಂದಾಪುರ: ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರ ಕೋರಿಕೆಯ ಮೇರೆಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಇವರು ಕುಂದಾಪುರ ತಾಲೂಕು ಅಮಾಸೆಬೈಲು ಸಮೀಪದ ಮಚ್ಚಟ್ಟು-ಕಬ್ಬಿನಾಲೆ ಶಿಥಿಲಾವಸ್ಥೆಯಲ್ಲಿರುವ ಸೇತುವೆಯನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸೇತುವೆಯಿಂದ ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಖುದ್ದಾಗಿ ಪರಿಶೀಲಿಸಿ ಗ್ರಾಮಸ್ಥರ ಜೊತೆ ಚರ್ಚಿಸಿದರು. ಅತಿ ಶೀಘ್ರದಲ್ಲಿ ಈ ಕುರಿತಂತೆ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದರು. ಸಾರ್ವಜನಿಕರ ಆಗ್ರಹದ ಮೇರೆಗೆ ಜಿಲ್ಲಾಧಿಕಾರಿ ಸಲ್ಲಿಸುವ ಪ್ರಸ್ತಾವನೆಗೆ ಸರ್ಕಾರದ ಹಂತದಲ್ಲಿ ಅನುದಾನ ಮಂಜೂರು ಮಾಡಲು ಪ್ರಯತ್ನಿಸುವುದಾಗಿ ಈಗಾಗಲೇ ಶಾಸಕ ಮಂಜುನಾಥ ಭಂಡಾರಿ ಅವರು ತಿಳಿಸಿರುತ್ತಾರೆ. ಶಾಸಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಊರಿನ ಸಮಸ್ತ ನಾಗರಿಕರ ಪರವಾಗಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಹರ್ಷ ಶೆಟ್ಟಿ ಅವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj