ಹೈದರಾಬಾದ್: ಕಳೆದ 18 ವರ್ಷಗಳಿಂದ ತೆಲುಗು ಮಾಧ್ಯಮದಲ್ಲಿ ಸುದ್ದಿ ನಿರೂಪಕಿಯಾಗಿ, ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಜನಪ್ರಿಯ ಟಿವಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35) ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಹೈದರಾಬಾದ್‌ನ ಜವಾಹರ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಪತ್ತೆಯಾಗಿದೆ.
ಸಾಯುವ ಮುನ್ನ “ಮನಸ್ಸು ಶಾಂತವಾಗಿದ್ದರೆ, ಆತ್ಮ ಮಾತನಾಡುತ್ತದೆ” ಎನ್ನುವ ಇವರ ಇನ್ಸ್ಟಾಗ್ರಾಂ ಪೋಸ್ಟ್ ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಸ್ತುತ ಶ್ವೇಚ್ಛಾ ಟಿ ನ್ಯೂಸ್(T News) ಚಾನೆಲ್‌ನಲ್ಲಿ ಟಿವಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದರು. ಶ್ವೇಚ್ಛಾ ಕೋಣೆಯಲ್ಲಿ ಲುಂಗಿಯಿಂದ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.
ಶ್ವೇಚ್ಛಾ ತನ್ನ ತಾಯಿ ಶ್ರೀದೇವಿ ಅವರೊಂದಿಗೆ ರಾಮ್ ನಗರದಲ್ಲಿ ವಾಸಿಸುತ್ತಿದ್ದರು. ಆದಾಗ್ಯೂ, ಅವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಈ ಹಿಂದೆ ಟಿವಿ9 ತೆಲುಗಿನಲ್ಲಿಯೂ ಸುದ್ದಿ ನಿರೂಪಕಿಯಾಗಿ ಕೆಲಸ ಮಾಡಿದ್ದರು. ಆದಾಗ್ಯೂ, ಶ್ವೇಚ್ಛಾ ಆತ್ಮಹತ್ಯೆ ಮಾಡಿಕೊಳ್ಳುವ ಕೆಲವು ಗಂಟೆಗಳ ಮೊದಲು, ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ಅದರಲ್ಲಿ ಬುದ್ಧನ ಉಲ್ಲೇಖವನ್ನು ಕ್ಯಾಪ್ಷನ್ ಬರೆದುಕೊಂಡಿದ್ದಾರೆ. “ಮನಸ್ಸು ಶಾಂತವಾಗಿದ್ದರೆ, ಆತ್ಮ ಮಾತನಾಡುತ್ತದೆ” ಎಂದು ಅವರು ಬರೆದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಶ್ವೇಚ್ಛಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಸಾವಿನ ಹಿಂದೆ ಕೌಟುಂಬಿಕ ಸಮಸ್ಯೆಗಳಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಇದನ್ನು ಅನುಮಾನಾಸ್ಪದ ಸಾವು ಎಂದು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝