ಕಲಬುರಗಿ: ಆಧಾರ್ ಕಾರ್ಡ್ ಕೇಳಿದ್ದಕ್ಕೆ ಮಹಿಳೆಯ ಸಂಬಂಧಿಕರು ಸರ್ಕಾರಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.
ಕೆಕೆಆರ್‌ಟಿಸಿ (KKRTC) ಕಂಡಕ್ಟರ್ ಅರ್ಜುನ್ ಕಟ್ಟಿಮನಿ ಹಲ್ಲೆಗೆ ಒಳಗಾಗದವರು.
ಯಾದಗಿರಿಯಿಂದ ಕಲಬುರಗಿಗೆ ಬಸ್ ಬರುವಾಗ, ವಾಡಿಯ ರಾವೂರ್ ಬಳಿ ಮಹಿಳೆಯೊಬ್ಬರು ಬಸ್ ಹತ್ತಿದ್ದು, ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟೆಕೆಟ್ ಪಡೆಯಲು ಮುಂದಾಗಿದ್ದಾರೆ. ಇದನ್ನು ಕಂಡ ನಿರ್ವಾಹಕ ನಿಮ್ಮ ಆಧಾರ್ ಕಾರ್ಡ್ ಕೊಡಿ, ಇದು ಬೇರೆಯವರ ಆಧಾರ್ ಕಾರ್ಡ್ ಎಂದು ಹೇಳಿದಾಗ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಮಹಿಳೆ ತನ್ನ ಸಂಬಂಧಿಕರಿಗೆ ಕರೆ ಮಾಡಿದ್ದಾಳೆ. ವಾಡಿ ಪಟ್ಟಣ ಆಗಮಿಸುತ್ತಿದ್ದಂತೆ ಮಹಿಳೆಯ ಸಂಬಂಧಿಕರು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಕೆಲಕಾಲ ಪ್ರಜ್ಞೆ ತಪ್ಪಿದ ನಿರ್ವಾಹಕ ಬಳಿಕ ಎಚ್ಚೆತ್ತುಕೊಂಡು ಬಳಿಕ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝