ತುಮಕೂರು: ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಎನ್ ರಾಜಣ್ಣ, ನನ್ನ ಪ್ರಕಾರ ಕಾಂಗ್ರೆಸ್‌ನಲ್ಲಿ ಮೂರು ಪವರ್ ಸೆಂಟರ್ ಇದೆ. ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷ, ಹಾಗೂ ಸಿಎಂ ಎಂಬ ಮೂರು ಪವರ್ ಸೆಂಟರ್ ಇದೆ. ಸಿಎಂ ಬದಲಾವಣೆ ಆಗಬೇಕೇ ಅನ್ನೋದನ್ನು ಕಾಲ ನಿರ್ಣಯ ಮಾಡಲಿದೆ. ಕೆಲವೊಂದು ಮಾಧ್ಯಮದಲ್ಲಿ ರಾಜಣ್ಣನವರು ಸಿದ್ದರಾಮಯ್ಯನವರಿಂದ ದೂರವಾಗಿದ್ದಾರೆಂದು ಸುದ್ದಿ ಮಾಡಿದ್ದಾರೆ. ಇದು ಸುಳ್ಳು ಸುದ್ದಿ, ನಾನು ಯಾವತ್ತಿಗೂ ಸಿಎಂ ಸಿದ್ದರಾಮಯ್ಯರ ಜೊತೆ ಇದ್ದೇನೆ. ಇವತ್ತೂ, ನಾಳೆ, ಯಾವತ್ತೂ ನಾನು ಸಿದ್ದರಾಮಯ್ಯ ಬಣ ಎಂದು ಹೇಳಿದರು.
ಆಗಸ್ಟ್- ಸೆಪ್ಟೆಂಬರ್ ಕ್ರಾಂತಿ ವಿಚಾರವಾಗಿ ಮಾತನಾಡಿದ ಅವರು, ಕ್ರಾಂತಿ ಎಂದರೇ ಹಲವಾರು ರೀತಿಯ ಕ್ರಾಂತಿ ಇದೆ. ಕ್ರಾಂತಿ ಎಂದರೆ ಹಸಿರು ಕ್ರಾಂತಿಯೂ ಆಗಬಹುದು ಅಲ್ವಾ? ಬರೀ ಕಾಂಗ್ರೆಸ್‌ನಲ್ಲಿ ಮಾತ್ರ ಕ್ರಾಂತಿ ಎಂದು ಯಾಕೆ ಭಾವಿಸುತ್ತೀರಾ? ಬಿಜೆಪಿಯಲ್ಲೂ ಕ್ರಾಂತಿ ಆಗುತ್ತಿದೆ. ಕೇಂದ್ರದಲ್ಲೂ ಕ್ರಾಂತಿ ಆಗಬಹುದು. ಆರ್‌ಎಸ್‌ಎಸ್‌ನವರ ಸೆಟ್ ಆಫ್ ಪ್ರಿನ್ಸಿಪಲ್‌ನಂತೆ 75 ವರ್ಷದ ನಂತರ ಯಾವುದೇ ಹುದ್ದೆಯಲ್ಲಿ ಇರಲಿಕ್ಕಿಲ್ಲ. ಹಾಗಾಗಿಯೇ ಅಡ್ವಾಣಿಗೆ ಪ್ರಧಾನಿ ಸ್ಥಾನ ಸಿಕ್ಕಿಲ್ಲ. ಈಗ ಅದೇ ಪ್ರಿನ್ಸಿಪಲ್ ಮೋದಿಯವರಿಗೂ ಅನ್ವಯಿಸುತ್ತದೆ. ಅದು ಒಂದು ಬದಲಾವಣೆ ಕ್ರಾಂತಿ ಅಲ್ವಾ? ಅದನ್ನು ಯಾಕೆ ನೀವು ಊಹೆ ಮಾಡಲ್ಲ? ಬರೀ ಕರ್ನಾಟಕದ ಕಾಂಗ್ರೆಸ್ ಪಾರ್ಟಿಯನ್ನು ಯಾಕೆ ಊಹೆ ಮಾಡ್ತೀರಾ? ಸಿಎಂ ಬದಲಾಯಿಸುತ್ತಾರೆ, ಸಂಪುಟ ವಿಸ್ತರಣೆ, ಅಧ್ಯಕ್ಷ ಬದಲಾವಣೆ, ಬರೀ ಇದರ ಬಗ್ಗೆ ಯಾಕೆ ಚರ್ಚೆ ಮಾಡುತ್ತೀರಾ? ರಾಜಕೀಯ ನಿಂತ ನೀರಲ್ಲ, ಅದು ಬದಲಾಗುತ್ತಿರುತ್ತದೆ. ರಾಜಿಕೀಯ ಸಂದರ್ಭಕ್ಕೆ ಅನುಗುಣವಾಗಿ ಬದಲಾಗುತ್ತದೆ. ರಾಜಕಾರಣ ಬದಲಾವಣೆಯ ನಿಯಮ ಹೊಂದಿದೆ. ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದೆಂದು ತಿಳಿಸಿದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj