ಮಂಗಳೂರು: ಸುನಿ ಸಿನಿಮಾಸ್ (ಸಿಂಪಲ್ ಸುನಿ) ಅರ್ಪಿಸುವ ಸಹ್ಯಾದ್ರಿ ಸ್ಟುಡಿಯೋಸ್ ನಿರ್ಮಾಣದ ‘ಜಂಗಲ್ ಮಂಗಲ್’ ಸಿನಿಮಾ ಜುಲೈ 4ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ರಕ್ಷಿತ್ ಕುಮಾರ್ ಸಿನಿಮಾವನ್ನು ನಿರ್ದೇಶಿಸಿದ್ದು ತಾರಾಗಣದಲ್ಲಿ ಯಶ್ ಶೆಟ್ಟಿ, ಉಗ್ರಂ ಮಂಜು, ಹರ್ಷಿತಾ ರಾಮಚಂದ್ರ, ಬಲ ರಾಜವಾಡಿ, ದೀಪಕ್ ರೈ ಪಾಣಾಜೆ, ಪುಷ್ಪರಾಜ್, ಚಂದ್ರಹಾಸ್ ಉಳ್ಳಾಲ್ ಅಭಿನಯಿಸಿದ್ದಾರೆ.
ಛಾಯಾಗ್ರಹಣ: ವಿಷ್ಣುಪ್ರಸಾದ್, ಸಂಗೀತ: ಪ್ರಸಾದ್ ಶೆಟ್ಟಿ, ಪೂರ್ಣಚಂದ್ರ ತೇಜಸ್ವಿ, ಸಂಕಲನ: ಮನು ಶೇಡ್ಗಾರ್, ಕಲಾ ನಿರ್ದೇಶನ: ವರದರಾಜ್ ಕಾಮತ್ ಅವರದ್ದಾಗಿದೆ.
ಸುತ್ತ ದಟ್ಟ ಕಾಡಿನಿಂದ ಸುತ್ತುವರೆದು, ಕಾಡಿನೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಸಣ್ಣ ಊರೊಂದರಲ್ಲಿ ನಡೆಯುವ ಅತ್ಯಂತ ಮಜವಾದ ಘಟನೆಯನ್ನು ಒಳಗೊಂಡಿರುವ ಚಿತ್ರ ಜಂಗಲ್ ಮಂಗಲ್. ಈಗಾಗಲೇ ಸಿನಿಮಾದ ಟ್ರೈಲರ್ ಸಖತ್ ಸದ್ದು ಮಾಡುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಸಣ್ಣ ಹಳ್ಳಿ ಹಾಗೂ ಪಶ್ಚಿಮ ಘಟ್ಟದ ತಪ್ಪಲಿನ ಕಾಡಿನಲ್ಲಿ ಸಂಪೂರ್ಣವಾಗಿ ಚಿತ್ರೀಕರಣ ನಡೆದಿದ್ದು ಇದೇ ಜುಲೈ 4ರಂದು ರಾಜ್ಯಾದ್ಯಂತ “ಜಂಗಲ್ ಮಂಗಲ್” ತೆರೆಗೆ ಬರಲಿದೆ.