ಮಂಗಳೂರು : ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಭಾನುವಾರ ಬೆಳಗ್ಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ ಎಂದು ವರದಿಯಾಗಿದೆ.
ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ಮಂಗಳೂರಿನ ಬಜ್ಪೆಯ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಸ್ಪೋಟಿಸುವ ಕುರಿತು ಇಮೇಲ್ ಮೂಲಕ ಬೆದರಿಕೆ ಬಂದಿದ್ದು, ಹಾಗಾಗಿ ಪೊಲೀಸರು ಬಿಗಿ ಭದ್ರತೆಯ ಬಗ್ಗೆ ನಿಗಾವಹಿಸುತ್ತಿದ್ದೇವೆ ಎಂದು ಬಜ್ಪೆ ಪೊಲೀಸರು ತಿಳಿಸಿದ್ದಾರೆ.
ವಿಮಾನ ನಿಲ್ದಾಣದ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ, ಪೊಲೀಸ್, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಕೂಡ ಇದರ ಬಗ್ಗೆ ನಿಗಾ ವಹಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj