ಅಕ್ರಮ ಸಂಬಂಧಕ್ಕೆ ಯುವಕನ ಬರ್ಬರ ಹತ್ಯೆ!

ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದಲ್ಲಿ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಕುಂಸಿ ನಿವಾಸಿ ವಸಂತ್(32) ಕೊಲೆಯಾದವನು. ಈತನನ್ನು ಕುಂಸಿ ಗ್ರಾಮದ ಚಿಕ್ಕಮರಸ ರಸ್ತೆಯಲ್ಲಿ ಕೊಲೆ ಮಾಡಲಾಗಿದೆ. ಇಬ್ಬರು ಪರಿಚಿತರೇ ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕುಂಸಿ ಠಾಣಾ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

error: Content is protected !!