ಅನ್ಯಕೋಮಿನ ವ್ಯಕ್ತಿಯನ್ನು ಮದುವೆಯಾಗಿದ್ದ ಮಹಿಳೆಯ ಶವ ಕಸದ ಲಾರಿಯಲ್ಲಿ ಪತ್ತೆ!

ಬೆಂಗಳೂರು: ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಮೃತದೇಹವನ್ನು ಮೂಟೆ ಮೂಟೆ ಕಟ್ಟಿ ಬಿಬಿಎಂಪಿಯ ಕಸದ ಲಾರಿಯಲ್ಲಿ ಇಟ್ಟ ಭೀಕರ ಘಟನೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣಾ ವಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಸುಮಾರು 30-40 ವಯಸ್ಸಿನ ಮಹಿಳೆಯ ಮೃತದೇಹ ಇದಾಗಿದೆ.

ಪೊಲೀಸರು ಮಹಿಳೆಯ ಗುರುತು ಪತ್ತೆ ಮಾಡಿದ್ದು, ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪಾ @ ಆಶಾ ಎಂದು ಗುರುತಿಸಲಾಗಿದೆ.

ಈಕೆ ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದುವೆಯಾಗಿದ್ದರು. ಇದೀಗ ಗಂಡನೇ ಕೊಲೆ ಮಾಡಿ, ಬಳಿಕ ಸಿ.ಕೆ. ಅಚ್ಚುಕಟ್ಟು ಪ್ರದೇಶದಲ್ಲಿ ಮೃತದೇಹವನ್ನು ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ, ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Garbage Truck 2

ರಾತ್ರಿ 1.40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿದೆ. ಬಳಿಕ ಮೃತದೇಹ ಇರುವುದು ಗೊತ್ತಾಗಿ ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿದೆ.

ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj

error: Content is protected !!