ಪಾಕಿಸ್ತಾನದ ಆತ್ಮಾಹುತಿ ಬಾಂಬ್ ದಾಳಿಗೆ 13 ಸೈನಿಕರು ಸಾವು, 29 ಮಂದಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 13 ಪಾಕ್ ಸೈನಿಕರು ಸಾವನ್ನಪ್ಪಿದ್ದು, 29 ಮಂದಿಗೆ ಗಾಯಗೊಂಡಿದ್ದಾರೆ. ಈ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

 

 

ಆತ್ಮಾಹುತಿ ಬಾಂಬ್ ಇದ್ದ ವಾಹನವು ಮಿಲಿಟರಿ ಬೆಂಗಾವಲು ಪಡೆಯ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಾಂಬ್ ಸ್ಫೋಟಗೊಂಡಿದ್ದು, 13 ಸೈನಿಕರು ಮೃತಪಟ್ಟಿದ್ದಾರೆ. ಜೊತೆಗೆ ಎರಡು ಮನೆಯ ಛಾವಣಿ ಕುಸಿದು 6 ಮಕ್ಕಳು, 10 ಜನ ಸೇನಾ ಸಿಬ್ಬಂದಿ ಸೇರಿದಂತೆ ಒಟ್ಟು 29 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಾಯಗೊಂಡವರ ಪೈಕಿ ನಾಲ್ವರು ಸೈನಿಕರ ಸ್ಥಿತಿ ಗಂಭೀರವಾಗಿದೆ. ಈ ಸ್ಥಳದಲ್ಲಿ ಆಗಾಗ ಪಾಕಿಸ್ತಾನಿ ತಾಲಿಬಾನ್ ಉಗ್ರರು ದಾಳಿ ನಡೆಸುತ್ತಿರುತ್ತಾರೆ. ಹೀಗಾಗಿ ಅವರೇ ಈ ದಾಳಿಯನ್ನು ಕೂಡ ನಡೆಸಿರಬಹುದು ಎಂದು ಶಂಕಿಸಲಾಗಿತ್ತು. ಸದ್ಯ ಪಾಕಿಸ್ತಾನಿ ತಾಲಿಬಾನ್‌ನ ಒಂದು ಬಣವಾದ ಹಫೀಜ್ ಗುಲ್ ಬಹದ್ದೂರ್ ತಂಡ ದಾಳಿ ನಡೆಸಿರಬಹುದು ಎನ್ನಲಾಗುತ್ತಿದೆ.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj

error: Content is protected !!