ತಿರುಪತಿ: ಆಂಧ್ರಪ್ರದೇಶದ ತಿರುಪತಿ ಬಳಿ ಸೋಮವಾರ ಮುಂಜಾನೆ ಅತೀ ರಭಸದಿಂದ ಬಂದ ಲಾರಿಯೊಂದು ಟೆಂಪೋ ಟ್ರಾವೆಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಮೂವರು ಸಾವನ್ನಪ್ಪಿದ್ದು, ಇತರ ಹನ್ನೆರಡು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಅನ್ನಮಯ್ಯ ಜಿಲ್ಲೆಯ ಕುರಬಳಕೋಟ ಮಂಡಲದ ಚೆನ್ನಮರ್ರಿ ಬಳಿ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಬಾಗೇಪಲ್ಲಿ ನಿವಾಸಿಗಳಾದ ಮೇಘರಾಜ್ (17), ಚರಣ್ (17), ಮತ್ತು ಶ್ರಾವಣಿ (28) ಮೃತಪಟ್ಟವರು.
ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮದನಪಲ್ಲಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಗಾಯಾಳುಗಳೂ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಕ್ಕಿ ಹೊಡೆದ ಲಾರಿ ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿಐ ಸತ್ಯನಾರಾಯಣ ತಿಳಿಸಿದ್ದಾರೆ. ಹೆಚ್ಚಿನ ತನಿಖೆಯನ್ನು ಪೊಲೀಸರು ಆರಂಭಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj