ಮಾಣಿ-ಮೈಸೂರು ರಾ.ಹೆಯಲ್ಲಿ ಜೀಪ್-ಲಾರಿ ಅಪಘಾತ

ಪುತ್ತೂರು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಭಾನುವಾರ ಸಂಜೆ ಜೀಪ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಜೀಪ್ ಚಾಲಕ ಗಾಯಗೊಂಡಿದ್ದಾರೆ. ಗಾಯಳು ದೇವಸ್ಯ ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ.

ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ ಅವರು ತಕ್ಷಣವೇ ಗಾಯಗೊಂಡವರನ್ನು ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj

error: Content is protected !!