ಬಂಟ್ವಾಳ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಸಂಭವಿಸಿದೆ.
ಬಂಟ್ವಾಳ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಅಧಿಕಾರಿ, ಶಂಭೂರು ಕೊಪ್ಪಳ ನಿವಾಸಿ ಚಿದಾನಂದ( 50) ಮೃತ ದುರ್ದೈವಿ.
ಸ್ಕೂಟರ್ ಸವಾರ ಚಿದಾನಂದ ಬಿಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್‌ನಲ್ಲಿ ಕ್ರಾಸ್ ಮಾಡುವ ವೇಳೆ ಬಿ.ಸಿ.ರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝