ಕಾರ್ಕಳ ಮೂಲದ 20 ವರ್ಷದ ಆಯೂಷ್‌ ಶೆಟ್ಟಿ ಚಾಂಪಿಯನ್‌

ಕ್ಯಾಲಿಫೋರ್ನಿಯಾ: ಯುಎಸ್‌ ಓಪನ್‌ BWF Super 300 ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಕಾರ್ಕಳ ಮೂಲದ ಆಯೂಷ್‌(20) ಶೆಟ್ಟಿ ಚಾಂಪಿಯನ್‌ ಆಗಿ ಹೊಮ್ಮಿದ್ದಾರೆ.

ಆಯುಷ್ ಫೈನಲ್‌ನಲ್ಲಿ ಕೆನಡಾದ ಬ್ರಿಯಾನ್ ಯಾಂಗ್ ಅವರನ್ನು 21-18, 21-13 ಅಂತರದಿಂದ ಸೋಲಿಸಿ ಮೊದಲ BWF ಟೂರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 2025 ರಲ್ಲಿ ಭಾರತಕ್ಕೆ ಸಿಕ್ಕಿದ ಮೊದಲ BWF ಟೂರ್ ಪ್ರಶಸ್ತಿ ಇದಾಗಿದೆ.

ಈ ವರ್ಷದ ಆರಂಭದಲ್ಲಿ ಆಯೂಷ್‌ ಶೆಟ್ಟಿ ಓರ್ಲಿಯನ್ಸ್ ಮಾಸ್ಟರ್ಸ್ ಸೂಪರ್ 300 ರ ಸೆಮಿಫೈನಲ್ ತಲುಪಿದ್ದರು. ಮಾಜಿ ವಿಶ್ವ ಚಾಂಪಿಯನ್ ಲೋಹ್ ಕೀನ್ ಯೂ ಮತ್ತು ರಾಸ್ಮಸ್ ಗೆಮ್ಕೆ ಅವರನ್ನು ಸೋಲಿಸಿದರು. ಮೇ ತಿಂಗಳಲ್ಲಿ ಅವರು ಹಿರಿಯ ಆಟಗಾರ ಕಿಡಂಬಿ ಶ್ರೀಕಾಂತ್ ಅವರನ್ನು ಸೋಲಿಸಿ ತೈಪೆ ಓಪನ್‌ನ ಸೆಮಿಫೈನಲ್ ಪ್ರವೇಶಿಸಿದ್ದರು.

ತಮ್ಮ ಎಂಟನೇ ವಯಸ್ಸಿನಲ್ಲಿಯೇ ಆಯುಷ್ ಶೆಟ್ಟಿ ಬ್ಯಾಡ್ಮಿಂಟನ್ ಆಡಲು ಆರಂಭಿಸಿದ್ದರು. ಆಯುಷ್ಯ್ ಮನೆಯ ಅಂಗಳದಲ್ಲಿ ಆಡುವುದನ್ನು ನೋಡಿ ತಂದೆ ‌ಬ್ಯಾಡ್ಮಿಂಟನ್‌ ಆಟದತ್ತ ಆಸಕ್ತಿ ಬೆಳೆಸಿದರು. ಆರಂಭದಲ್ಲಿ ಕಾರ್ಕಳ ಮತ್ತು ಮಂಗಳೂರಿನಲ್ಲಿ ತರಬೇತಿ ಪಡೆದಿದ್ದರು. ನಂತರ ಆಯುಷ್ ಶೆಟ್ಟಿ ಕುಟುಂಬ ಬೆಂಗಳೂರಿಗೆ ಸ್ಥಳಾಂತರವಾಗಿದೆ.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj

error: Content is protected !!