ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಆ ವಿಭಾಗದ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ.

ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್ ಎಲ್ಲಾ ಸುಟ್ಟು ಹೋಗಿದೆ. ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಗ್ರೌಂಡ್ ಫ್ಲೋರ್ ಪೂರ್ತಿ ಬೆಂಕಿ ಆವರಿಸಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ರೋಗಿಗಳನ್ನ ಶಿಫ್ಟ್ ಮಾಡಲಾಗಿದೆ.

ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 14 ಪುರುಷರು, 5 ಮಹಿಳೆಯರು ಹಾಗೂ 7 ಮಂದಿ ಮಕ್ಕಳು ಸೇರಿ ಒಟ್ಟು 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ.

ಡ್ಯೂಟಿ ಡಾಕ್ಟರ್ ದಿವ್ಯಾ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ವೈದ್ಯೆ ದಿವ್ಯಾ ನೇತೃತ್ವದ ತಂಡ ರಾತ್ರಿಪಾಳಿಯಲ್ಲಿ(Night Shift) ಕೆಲಸ ಮಾಡುತ್ತಿದ್ದರು. ಮುಂಜಾನೆ 3:30ರ ಸುಮಾರಿಗೆ ಡಾ. ದಿವ್ಯಾ ಮೊದಲ ಮಹಡಿಗೆ ಹೋಗಿದ್ದರು. ಈ ವೇಳೆ ಸೆಮಿನರ್ ರೂಂನಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದ್ದು, ಶಬ್ದ ಕೇಳಿ ಕೂಡಲೇ ಅಲರ್ಟ್ ಆದ ದಿವ್ಯಾ ಮತ್ತು ಸಿಬ್ಬಂದಿ ಕೋಡ್ ರೆಡ್ ಅಲರ್ಟ್ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj

error: Content is protected !!