ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯ ಬಂಧನ

ಬಂಟ್ವಾಳ: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇನ್ನೋರ್ವ ಆರೋಪಿ ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಪೊಲೀಸರುಯನ್ನು ಬಂಧಿಸಿದ್ದಾರೆ.

ಈಗಾಗಲೇ ಪ್ರಕರಣ ಸಂಬಂಧ ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ.

ಸದ್ಯ ಬಂಟ್ವಾಳದ ರಾಯಿ ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದೆ.

ಹಳೇ ದ್ವೇಷದ ಹಿನ್ನೆಲೆ ಈ ಹತ್ಯೆ ನಡೆಸಿದ್ದಾರೆ ಎನ್ನುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹೆಚ್ಚಿನ ವಿಚಾರ ಮುಂದಿನ ತನಿಖೆಯಲ್ಲಿ ತಿಳಿಯಲಿದೆ.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj

error: Content is protected !!