ಬೆಂಗಳೂರು: ರಾಜಕಾರಣಿಗಳೊಂದಿಗೆ ಮಲಗುವಂತೆ ಪತಿಯ ಒತ್ತಾಯ ಹಾಗೂ ಅತ್ತೆ ಮಾವ ನೀಡುತ್ತಿದ್ದ ವರದಕ್ಷಿಣೆ ಕಿರುಕುಳ ಸಹಿಸಲಾಗದೇ ಓರ್ವ ಮಹಿಳೆ ಪತಿ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಗೆ ದೂರುನೀಡಿದ್ದಾರೆ.
ಯೂನಿಸ್ ಪಾಷಾ ಪ್ರಕರಣದ ಆರೋಪಿ
ದೂರಿನಲ್ಲಿ ಏನಿದೆ?
ಪತಿ ಯೂನಿಸ್ ಪಾಷಾ ರಾಜಕಾರಣಿಗಳು, ಸಹಚರರ ಜೊತೆ ಮಲಗುವಂತೆ ಒತ್ತಾಯಿಸುತ್ತಾರೆ. ಒಪ್ಪದಿದ್ದಕ್ಕೆ ಈಗಾಗಲೇ 6 ಬಾರಿ ತಲಾಖ್ ನೀಡಿದ್ದಾನೆ. ಜೊತೆಗೆ ಗರ್ಭಪಾತ ಮಾಡಿಸಿದ್ದಾನೆ. ಅಷ್ಟೇ ಅಲ್ಲದೇ ತಲೆಗೆ ಗನ್ ಇಟ್ಟು ಬೆದರಿಕೆ ಹಾಕುತ್ತಾನೆ. ಪತ್ನಿ ಮನೆಯವರಿಗೆಲ್ಲ ಮಚ್ಚು, ಲಾಂಗ್ ತೋರಿಸಿ ಬೆದರಿಸುತ್ತಾನೆ ಎಂದು ಆರೋಪಿಸಿದ್ದಾರೆ.
ಅತ್ತೆ, ಮಾವ ಕೂಡ ವರದಕ್ಷಿಣೆಗಾಗಿ ನಿರಂತರ ಕಿರುಕುಳ ನೀಡುತ್ತಾರೆ. ಮಾವ ಮಸಾಜ್ ಮಾಡುವಂತೆ ಕೇಳುತ್ತಾರೆ ಎಂದು ಪತಿ, ಅತ್ತೆ ಹಾಗೂ ಮಾವನ ಮೇಲೆ ಸಾಲು ಸಾಲು ಆರೋಪಗಳನ್ನು ಹೊರಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನ್ಯಾಯ ಕೊಡಿಸಿ ಎಂದು ಮಹಿಳೆ ಕೇಳಿಕೊಂಡಿದ್ದಾರೆ.
ಸದ್ಯ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಯೂನಿಸ್ ಮತ್ತು ಆತನ ತಂದೆ-ತಾಯಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝