ಕೇರಳದ ಕುಂಬಳೆಯಲ್ಲಿ ನಾಪತ್ತೆಯಾಗಿದ್ದ ಪ್ರೇಮಿಗಳು ಉಡುಪಿಯಲ್ಲಿ ಪತ್ತೆ!

ಉಡುಪಿ: ಕೇರಳದ ಕುಂಬಳೆಯಲ್ಲಿ ನಾಪತ್ತೆಯಾಗಿದ್ದ ಪ್ರೇಮಿಗಳು ಉಡುಪಿಯಲ್ಲಿ ಪತ್ತೆಯಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತರು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಜೋಡಿಗಳನ್ನು ಪತ್ತೆಹಚ್ಚಿದ್ದು, ಮನೆಯಲ್ಲಿ ವಿರೋಧ ಮಾಡಿದ್ದಕ್ಕೆ ಪ್ರೇಮಿಗಳು ಮನೆಮಂದಿಗೆ ಸೂಚನೆ ನೀಡದೆ ಜೋಡಿಗಳು ನಾಪತ್ತೆಯಾಗಿದ್ದರು.

 

 

ಈ ಕುರಿತಾಗಿ ಕುಂಬಳೆ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಕೇರಳದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ಪ್ರೇಮಿಗಳು ಕಂಡುಬಂದಿದ್ದು, ಯುವಕ ಯುವತಿಯ ವರ್ತನೆಯಲ್ಲಿ ಅನುಮಾನ ಬಂದು ವಿಚಾರಿಸಿದಾಗ ಕುಂಬಳೆಯಿಂದ ನಾಪತ್ತೆಯಾಗಿದ್ದವರೆಂದು ಮಾಹಿತಿ ದೊರಕಿದೆ.

ತಕ್ಷಣವೇ ರೈಲ್ವೆ ಪೊಲೀಸರು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಇಳಿಸಿ, ಇಂದ್ರಾಳಿ ಸ್ಟೇಷನ್ ನ ಇನ್ಸ್ಪೆಕ್ಟರ್ ಮಧುಸೂದನ್ ಅವರಿಗೆ ಜೋಡಿಯನ್ನು ಒಪ್ಪಿಸಿದ್ದಾರೆ. ಸ್ಥಳೀಯ ಪೊಲೀಸರು ಪ್ರೇಮಿಗಳನ್ನು ಕುಂಬಳೆಯ ಪೋಲಿಸರಿಗೆ ಒಪ್ಪಿಸಿದ್ದಾರೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/FxkiqQfrxlV57ZfFGy2ssw?mode=r_t

error: Content is protected !!