ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಬೇಗುವಳ್ಳಿಯಲ್ಲಿ ಲಾರಿ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಈ ಪೈಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/FxkiqQfrxlV57ZfFGy2ssw?mode=r_t