ಮಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ಫೇಸ್‌ಬುಕ್‌ನಲ್ಲಿ ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಮಾಡುತ್ತಿದ್ದ ಇಬ್ಬರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯ ವಿಜ್ಜಿ ಮೇಲೆ ಕೇಸ್:
ಜು.1ರಂದು ಧರ್ಮಸ್ಥಳ ನಿವಾಸಿ ರಮೇಶ್ ಎಂಬವರು ತನ್ನ ಫೇಸ್ ಬುಕ್ ಖಾತೆಯನ್ನು ಪರಿಶೀಲಿಸಿಸುತ್ತಿದ್ದರು. ಆಗ ವಿಜಯ ವಿಜ್ಜಿ (Vijaya Viji) ಎಂಬ ಫೇಸ್ ಬುಕ್ ಖಾತೆಯಲ್ಲಿ ಆರೋಪಿ ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಹಾಕಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ರಮೇಶ್ ನೀಡಿದ ದೂರಿನ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 37/2025 ಕಲಂ 296 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ನವೀನ್ ಗೌಡ ಮೇಲೆ ಪ್ರಕರಣ ದಾಖಲು
ಜು.1ರಂದು ಪ್ರಕರಣದ ಧರ್ಮಸ್ಥಳ ನಿವಾಸಿ ಪುರಂದರ ಗೌಡ ಎಂಬವರು ತನ್ನ ಫೇಸ್ ಬುಕ್ ಖಾತೆಯನ್ನು ಪರಿಶೀಲಿಸಿಸುತ್ತಿದ್ದರು. ಈ ವೇಳೆ ನವೀನ್ ಗೌಡ(Naveen Gowda) ಎಂಬ ಫೇಸ್ ಬುಕ್ ಖಾತೆಯಲ್ಲಿ ಆರೋಪಿ ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಹಾಕಿರುವುದು ಕಂಡುಬಂದಿದೆ. ಈ ಹಿನ್ನೆಲೆ ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಅ.ಕ್ರ 38/2025 ಕಲಂ 296 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝