“ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸವಾಲುಗಳಿವೆ” -ಉಮ್ಮರ್ ಯು.ಎಚ್.

ಮಂಗಳೂರು: “ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸವಾಲುಗಳಿವೆ. ಈ ನಡುವೆ ಮಾಧ್ಯಮ ಕ್ಷೇತ್ರದ ತಳಮಟ್ಟದಲ್ಲಿ ಪತ್ರಿಕಾವಿತರಣೆ ನಡೆಸುತ್ತ ರುವವರನ್ನು ಗೌರವಿಸುತ್ತಿರುವುದು ಶ್ಲಾಘನೀಯ” ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮ್ಮರ್ ಯು.ಎಚ್. ಹೇಳಿದರು. ಅವರು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತಾಡಿದರು.


ಮಾಧ್ಯಮದ ಸವಾಲುಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ವಾಲ್ಟರ್ ನಂದಳಿಕೆ ಅವರು “ಮುದ್ರಣ ಮಾಧ್ಯಮ ಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸ ಇನ್ನೂ ಉಳಿದಿದೆ ಇದೆ. ಸಮೀಕ್ಷೆಯೊಂದರ ಪ್ರಕಾರ ಶೇ.60ರಷ್ಟು ಜನರು ಮುದ್ರಣ ಮಾಧ್ಯಮವನ್ನು ನಂಬುತ್ತಾರೆ. ಶೇ.63ರಷ್ಟು ಜನರು ಟಿ.ವಿ ನ್ಯೂಸ್ ನ್ನು ನಂಬುವುದಿಲ್ಲ.ಶೇ 89ರಷ್ಟು ಮಂದಿ ಸಾಮಾಜಿಕ ಮಾಧ್ಯಮಗಳನ್ನು ಆನ್ ಲೈನ್ ವೆಬ್ ಸೈಟ್ ಗಳನ್ನು ನಂಬುವುದಿಲ್ಲ ಎಂದರು. ಇದೇ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕ ರಘುರಾಮ.ಕೆ ಯವರನ್ನು ಸನ್ಮಾನಿಸಲಾಯಿತು.


ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ದಕ್ಷಿಣ ಕನ್ನಡ ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ಹಿರಿಯ ಪತ್ರಕರ್ತರಾದ ಚಿದಂಬರ ಬೈಕಂಪಾಡಿ, ಕುಮಾರನಾಥ್, ಕೆ.ವಿ‌.ಜಾರ್ಜ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ,ದ.ಕ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಉಪಸ್ಥಿತರಿದ್ದರು.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/FxkiqQfrxlV57ZfFGy2ssw?mode=r_t

error: Content is protected !!