ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಬೆಳೆಸಿದ್ದು , ಅವರಿಗೆ ಘಾನಾ ದೇಶದಲ್ಲಿ ರಾಷ್ಟ್ರೀಯ ಗೌರವ `ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
5 ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಮೊದಲು ಘಾನಾ ದೇಶಕ್ಕೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಘಾನಾದ ಅಧ್ಯಕ್ಷ ಜಾನ್ ಡ್ರಾಮಣಿ ಮಹಾಮ (John Dramani Mahama) ಅವರು ಮೋದಿಯನ್ನು ಪ್ರಭಾವಶಾಲಿ ಜಾಗತಿಕ ನಾಯಕ ಎಂದು ಗುರುತಿಸಿ ರಾಷ್ಟ್ರೀಯ ಗೌರವ `ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ (Officer Of The Order Of The Star) ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.
ಪ್ರಶಸ್ತಿ ಕುರಿತು ಮಾತನಾಡಿದ ಅವರು, ಈ ಗೌರವ ಕೇವಲ ವೈಯಕ್ತಿಕ ಶ್ರಮದಿಂದಲ್ಲ, ಇದು 140 ಕೋಟಿ ಭಾರತೀಯರ ಸಾಧನೆ. ಅವರ ಪರವಾಗಿ ನಾನು ಇದನ್ನು ಸ್ವೀಕರಿಸಿದ್ದೇನೆ. ಈ ಪ್ರಶಸ್ತಿಯನ್ನು ರಾಷ್ಟ್ರದ ಯುವಜನತೆಗೆ ಅರ್ಪಿಸುತ್ತೇನೆ ಹಾಗೂ ಇದು ಭಾರತದ ಶ್ರೀಮಂತ ಪರಂಪರೆಯನ್ನು ಎತ್ತಿತೋರಿಸುತ್ತದೆ ಎಂದು ತಿಳಿಸಿದ್ದಾರೆ. ಈ ಕುರಿತು ಮೋದಿಯವರು ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಘಾನಾದ ರಾಷ್ಟ್ರೀಯ ಪ್ರಶಸ್ತಿ `ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ ನೀಡಿದ್ದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ಈ ಪ್ರಶಸ್ತಿಯು ಭಾರತ ಮತ್ತು ಘಾನಾ ನಡುವಿನ ಸ್ನೇಹವನ್ನು ಗಟ್ಟಿಯಾಗಿರಿಸುತ್ತದೆ ಮತ್ತು ದ್ವಿಪಕ್ಷೀಯ ಸಂಬಂಧಗಳಿಗೆ ಒತ್ತು ನೀಡುತ್ತದೆ ಎಂದು ತಿಳಿಸಿದ್ದಾರೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/FxkiqQfrxlV57ZfFGy2ssw?mode=r_t