ಮಂಗಳೂರು: ಚಲಿಸುವ ಕಾರಿನಲ್ಲಿ ಅಪಾಯಕಾರಿ ಹುಚ್ಚಾಟ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಪ್ರಕರಣ ಕೈಗೊಂಡು 6,500 ರೂ. ದಂಡ ವಿಧಿಸಿದ್ದಾರೆ.
ನಗರದ ವಳಚ್ಚಿಲ್ ಬಳಿಯ ರಾಷ್ಟ್ರೀಯ ಹೆದ್ದಾರಿ-73 ರಲ್ಲಿ ಕಾರು ಚಲಿಸುತ್ತಿರುವಾಗಲೇ ನಾಲ್ವರು ವಿದ್ಯಾರ್ಥಿಗಳು ಕಾರಿನ ವಿಂಡೋ ಕೆಳಗಿಳಿಸಿ ಅದರಲ್ಲಿಯೇ ಕುಳಿತು, ನಿಂತು, ನೇತಾಡುತ್ತಾ ಅಪಾಯಕಾರಿ ಸಾಹಸಗಳನ್ನು ಮಾಡುತ್ತಿದ್ದರು. ಇದರ ವಿಡಿಯೋ ಚಿತ್ರೀಕರಿಸಿದ ಸಾರ್ವಜನಿಕರು ಅದನ್ನು ಪೊಲೀಸರಿಗೆ ರವಾನಿಸಿದ್ದರು.
ತಕ್ಷಣ ಕಾರ್ಯಾಚರಣೆಗಿಳಿದ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಕಾರನ್ನು ಪತ್ತೆಹಚ್ಚಿ ಅದರಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ 6,500 ರೂ. ದಂಡ ಸಂಗ್ರಹಿಸಿ, ಪ್ರಕರಣ ದಾಖಲಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝