ಮಂಗಳೂರಿನಲ್ಲಿ ವಿಶೇಷ ಕಾರ್ಯಪಡೆ ಘಟಕದ ಅಧಿಕಾರಿ, ಸಿಬ್ಬಂದಿಗೆ ತರಬೇತಿ

ಮಂಗಳೂರು: ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ (ಎಸ್‌ಎಎಫ್) ಅಧಿಕಾರಿ ಮತ್ತು ಸಿಬ್ಬಂದಿಗೆ ನಗರದ ನೆಹರೂ ಮೈದಾನದಲ್ಲಿ ಬುಧವಾರ ದ.ಕ. , ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರಾತ್ಯಕ್ಷಿಕೆಯೊಂದಿಗೆ ತರಬೇತಿ ನೀಡಲಾಯಿತು.

ಈ ತರಬೇತಿ ಮತ್ತು ಪ್ರಾತ್ಯಕ್ಷಕೆಯನ್ನು ಉತ್ತಮ ಕಾರ್ಯಕ್ಷಮತೆಗಾಗಿ ಕೋಮುಗಲಭೆಗಳ ಸಂದರ್ಭಗಳಲ್ಲಿ ಉದ್ರಿಕ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ ಗಲಭೆ ಪ್ರತಿರೋಧ ಗನ್ ಮತ್ತು ಸ್ಟನ್ ಶೆಲ್‌ಗಳ ಉಪಯೋಗದ ಬಗ್ಗೆ ನಡೆಸಲಾಗಿದೆ. ತರಬೇತಿ ಕಾರ್ಯಗಾರದಲ್ಲಿ ವಿಶೇಷ ಕಾರ್ಯಪಡೆ ಘಟಕದ ಆಪರೇಷನಲ್ ವಿಂಗ್‌ನ 95 ಮಂದಿ ಅಧಿಕಾರಿ ಮತ್ತು ಸಿಬಂದಿ ಪಾಲ್ಗೊಂಡಿದ್ದರು.

ಗುಪ್ತಚರ ವಿಭಾಗದ ಕೆಲವು ಅಧಿಕಾರಿ ಮತ್ತು ಸಿಬ್ಬಂದಿಗೆ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸುವ ಕುರಿತು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುವ ದ್ವೇಷ ಭಾಷಣ ಇತ್ಯಾದಿ ಮಾಹಿತಿಗಳನ್ನು ಸಂಗ್ರಹಿಸುವ ಕುರಿತು ಪರಿಣಾಮಕಾರಿಯಾಗಿ ತರಬೇತಿಯನ್ನು ನೀಡಲಾಗಿದೆ. ಅವರು ಕಾರ್ಯಪ್ರವೃತ್ತಿಗೆ ಸಿದ್ದರಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/FxkiqQfrxlV57ZfFGy2ssw?mode=r_t

error: Content is protected !!