ಲಕ್ನೋದಲ್ಲಿ ಬೈಕ್‌ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ – ತಂದೆ ಹಾಗೂ ಮಕ್ಕಳು ಸೇರಿ ಐವರ ಮೃತ್ಯು

ಲಕ್ನೋ: ಉತ್ತರ ಪ್ರದೇಶದ ಬುಲಂದ್ ಶಹರ್ ರಸ್ತೆಯ ಮಿನಿಲ್ಯಾಂಡ್ ಶಾಲೆ ಬಳಿರಾಂಗ್ ರೂಟ್‌ಲ್ಲಿ ವೇಗವಾಗಿ ಬಂದ ಟ್ರಕ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ 4 ಮಕ್ಕಳು ಸೇರಿ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭಯಾನಕ ಘಟನೆ ನಡೆದಿದೆ.

ರಫೀಕ್ ನಗರದ ನಿವಾಸಿ ಡ್ಯಾನಿಶ್ (40) ಮತ್ತು ಅವರ ಇಬ್ಬರು ಮಕ್ಕಳು ಹಾಗೂ ಸಹೋದರನ ಮಕ್ಕಳು ಮೃತರು ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಸ್ನೇಹಿತನ ತೋಟದಲ್ಲಿರುವ ಈಜುಕೊಳದಿಂದ ಬೈಕ್‌ನಲ್ಲಿ ಹಿಂದಿರುಗುವಾಗ ಈ ಘಟನೆ ಸಂಭವಿಸಿದೆ.

ಟ್ರಕ್ ಡಿಕ್ಕಿಯಾದ ರಭಸಕ್ಕೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಡಿಕ್ಕಿ ಹೊಡೆದ ಟ್ರಕ್‌ನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/FxkiqQfrxlV57ZfFGy2ssw?mode=r_t

error: Content is protected !!