ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಪುತ್ತೂರಿನ ಸಾಮೆತ್ತಡ್ಕದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿಗಳು, ಮನೆಯ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ದೂರಿನ ಮೇರೆಗೆ, ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು ಘಟನೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲವು ಜು.15 ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/FxkiqQfrxlV57ZfFGy2ssw?mode=r_t