ಬೆಂಗಳೂರು: ಎನ್.ಹನುಮಂತರಾಜು ಹಾಗೂ ಲಯನ್ ಎಸ್. ವೆಂಕಟೇಶ್ ನಿರ್ಮಾಣದ, ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಮಾಲಾಶ್ರೀ, “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಮತ್ತು ಕಿಶನ್ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರ ನಾಳೆ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ “ಪೆನ್ ಡ್ರೈವ್” ಚಿತ್ರದ ಹಾಡುಗಳು, ಟೀಸರ್ ಹಾಗೂ ಹಾಡುಗಳು ಜನಮೆಚ್ಚುಗೆ ಪಡೆದಿದೆ.
ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಅವರೆ “ಪೆನ್ ಡ್ರೈವ್” ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಮಾಲಾಶ್ರೀ ಅವರು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ತನಿಷಾ ಕುಪ್ಪಂಡ ಹಾಗು ಕಿಶನ್ ಅವರು ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು, ಎನ್ ಹನುಮಂತರಾಜು ಮುಂತಾದವರು ತಾರಾಬಳಗದಲ್ಲಿದ್ದಾರೆ. ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದು ಪ್ರೇಕ್ಷಕರಿಗೆ ಇಷ್ಟವಾಗುತ್ತಾ ಇಲ್ವಾ ಅನ್ನೋದನ್ನು ತಿಳಿಯಲು ಕಾದು ನೋಡಬೇಕಿದೆ.