ಉಡುಪಿ: ಇತ್ತೀಚೆಗೆ ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಧರ್ಮ-ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಹೊರಿಸಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆಯು ಪೂರ್ಣಗೊಳ್ಳುವ ಮೊದಲೇ ಆರೋಪಿ ಶರಣ್ ಪಂಪ್ ವೆಲ್ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಸುದ್ದಿಗೋಷ್ಠಿಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಇದು ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 353(2) BNS ರಂತೆ ಪ್ರಕರಣ ದಾಖಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝