ಪ್ರಚೋದನಕಾರಿ ಸ್ಟೇಟಸ್:‌ ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಕಾರ್ಕಳದ ಇರ್ವತ್ತೂರು ಗ್ರಾಮದ ಆಶಿಕ್‌ ಎಸ್‌. ಕೋಟ್ಯಾನ್‌ (25) ಎಂಬಾತನನ್ನು ಮಂಗಳೂರು ಪೊಲೀಸರು ನಿನ್ನೆ ಬಂಧಿಸಿದ್ದಾರೆ.

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಸಮಾಜದ ಶಾಂತಿ ನೆಮ್ಮದಿಗೆ ಅಪಾಯವುಂಟು ಮಾಡುವ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವ್ಯಕ್ತಿಗಳ ಪತ್ತೆಗಾಗಿ ಈ ಹಿಂದೆ ಮಂಗಳೂರು ನಗರ ಕಮಿಷನರೇಟ್‌ ವ್ಯಾಪ್ತಿಯಿಂದ ವಿಶೇಷ ತಂಡಗಳನ್ನು ರಚನೆ ಮಾಡಿದ್ದು, ಈ ತಂಡಗಳು ಈತನನ್ನು ಬಂಧಿಸಿದೆ.

ಅಶಿಕ್‌ ಇನ್‌ಸ್ಟಾಗ್ರಾಂನಲ್ಲಿ “ನಮಗೆ ಯಾವುದೇ ರೀತಿಯ ಉತ್ತರಗಳು ಬೇಡ, ರಕ್ತಕ್ಕೆ ರಕ್ತವೇ ಉತ್ತರವಾಗಬೇಕು, ಜೀವಕ್ಕೆ ಜೀವವೇ ಬೇಕು’ ಎಂದು ಸ್ಟೇಟಸ್‌ ಹಾಕಿದ್ದ. ಈತನ ಮೇಲೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಗೆ ಸೆನ್‌ ಅಪರಾಧ ಠಾಣೆಗೆ ವರ್ಗಾವಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!