ಮಂಗಳೂರು: ಪುತ್ತೂರು ʻಮಗು ಡೆಲಿವರಿʼ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ ರಾವ್(21)ನನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ ಪೊಲೀಸರು ಮೈಸೂರಿನ ಟಿ. ನರಸಿಪುರ ಎಂಬಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ:49/2025, ಕಲಂ:64(1), 69 ಬಿ.ಎನ್.ಎಸ್ 2023 ಪ್ರಕರಣ ದಾಖಲಾಗಿತ್ತು. ನಿನ್ನೆ ರಾತ್ರಿ ಆರೋಪಿಯನ್ನು ಪೊಲೀಸರು ಬಂಧಿಸಿ ಕರೆತಂದಿದ್ದು, ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಡಾ. ಅರುಣ್ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.