ವಿದೇಶಿ ಉದ್ಯೋಗ ಕೊಡಿಸುವ ನೆಪದಲ್ಲಿ ಕೋಟಿ ಕೋಟಿ ವಂಚನೆ: ಇಬ್ಬರ ಬಂಧನ

ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವ ನೆಪ ಹೇಳಿ 4.50 ಕೋಟಿ ರೂ.ಗೂ ಹೆಚ್ಚು ಹಣವನ್ನ ದೋಚಿರುವ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಇಬ್ಬರು ಸೂತ್ರಧಾರಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ದಿಲ್ ಶಾದ್ ಅಬ್ದುಲ್ ಸತ್ತಾರ್ ಖಾನ್ (45) ಹಾಗೂ ಇನ್ನೊಬ್ಬ ಸಾಹುಕಾರ ಕಿಶೋರ್ ಕುಮಾರ್ (34) ಆರೋಪಿಗಳು.

ಇವರು ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿ ಹೈಯರ್ ಗ್ರೋ ಇಂಟರ್‌ನ್ಯಾಷನಲ್ ಸಂಸ್ಥೆ ಕಚೇರಿ ತೆರೆದಿದ್ದರು. ವಿದೇಶದಲ್ಲಿ ಉದ್ಯೋಗ ಕೊಡಿಸುವುದು ವೀಸಾ ಮಾಡಿಸುವುದಾಗಿ ಅನೇಕ ಜನರಿಂದ ಹಣ ಪಡೆದುಕೊಂಡಿದ್ದರು. ಸುಮಾರು 282 ಜನರು ಮೋಸ ಹೋಗಿದ್ದರು. ಒಟ್ಟು 4.50 ಕೋಟಿ ರೂ. ವಂಚನೆ ನಡೆದಿತ್ತು. ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಇದರ ಬಗ್ಗೆ ತನಿಖೆ ನಡೆಸಿದ ಪೊಲೀಸರು ವಸೀಉಲ್ಲಾ‌ಖಾನ್ ಎಂಬಾತನನ್ನ ಬಂಧಿಸಿ ಜೈಲಿಗೆ ತಳ್ಳಿದ್ದರು.

ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಆದೇಶದಂತೆ ಮಂಗಳೂರು ಸಿಸಿಬಿ ಪೊಲೀಸರು ತನಿಖೆಯನ್ನು ಮುಂದುವರಿಸಿ ಮುಂಬೈಗೆ ತೆರಳಿ ಇಡೀ ಜಾಲದ ಸೂತ್ರಧಾರಿಗಳಾದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/FxkiqQfrxlV57ZfFGy2ssw?mode=r_t

error: Content is protected !!