ʻಆಪರೇಷನ್‌ ಸಿಂಧೂರ್‌ʼ ಸದಾ ನೆನಪಲ್ಲಿರಲು ʻಸಿಂಧೂರ ವಿಜಯʼ ಪಾರ್ಕ್!

ಮಂಗಳೂರು: ‌ ಭಾರತವು ಪಾಕಿಸ್ತಾನದ ಉಗ್ರರ ಮೇಲಿನ ಕಾರ್ಯಾಚರಣೆಯ ಸಂದರ್ಭ ಜಯವನ್ನು ಪಡೆದಿರುವುದರ ಸೈನಿಕರ ಶೌರ್ಯದ ಕುರಿತಾಗಿ ಸಿಂಧೂರ ಕಾರ್ಯಾಚರಣೆ ಸದಾ ನೆನಪಿನಲ್ಲಿ ಉಳಿಯುವಂತಾಗಲು ಉದ್ಯಾನವನಕ್ಕೆ ʻಸಿಂಧೂರ ವಿಜಯʼ ಹೆಸರನ್ನು ನಾಮಕರಣ ಮಾಡಲಾಗಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್‌ ಶೆಟ್ಟಿ ಹೇಳಿದರು.

ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್‌ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ಇದರ ವತಿಯಿಂದ ನಿರ್ಮಾಣಗೊಂಡಿರುವ ನೂತನ ʻಸಿಂಧೂರ ವಿಜಯ ಉದ್ಯಾನವನʼದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಟ್ಟಾರ ಚೌಕಿಯಲ್ಲಿ ಮೊದಲ ಅವಧಿಯಲ್ಲಿ ಗುದ್ದಲಿ ಪೂಜೆಯನ್ನು ನೆರವೇರಿಸಿದ್ದೆವು. ಸ್ಥಳೀಯ ಕಾರ್ಪೊರೇಟರ್, ಸಾರ್ವಜನಿಕರು ಇಲ್ಲಿನ ಜಂಕ್ಷನಿನಲ್ಲಿ ಸೈನಿಕರ ಸ್ಮಾರಕವನ್ನು ನಿರ್ಮಿಸುವ ಬಗ್ಗೆ ಬೇಡಿಕೆಯನ್ನು ಇಟ್ಟಿದ್ದರು. ಸೈನಿಕರ ತ್ಯಾಗ ಬಲಿದಾನವನ್ನು ಸದಾ ಸ್ಮರಿಸಿಕೊಳ್ಳುವ ನಿಟ್ಟಿನಲ್ಲಿ, ಅವರು ದೇಶದ ರಕ್ಷಣೆಗಾಗಿ ತಮ್ಮ ಕುಟುಂಬವನ್ನು ತೊರೆದು ಗಾಡಿ ಭಾಗದಲ್ಲಿ ಇದ್ದುಕೊಂಡು ದೇಶದ ಜನತೆ ಸುರಕ್ಷತೆಯಿಂದ ಜೀವನ ನಡೆಸಲು ತ್ಯಾಗವನ್ನೇ ಮಾಡುತ್ತಿದ್ದಾರೆ. ಹೀಗಾಗಿ ಈ ಉದ್ಯಾನವನ ನಿರ್ಮಾಣದಲ್ಲಿ ನಮಗೂ ಸಂತೃಪ್ತಿಯನ್ನು ಉಂಟುಮಾಡಿದೆ. ನಗರ ಪ್ರವೇಶಿಸುವ ಜಂಕ್ಷನ್‌ನಲ್ಲಿ ಈ ಉದ್ಯಾನವನ ನಿರ್ಮಾಣಗೊಂಡಿರುವುದರಿಂದ ಹೆಚ್ಚು ಆಕರ್ಷಣೀಯವಾಗಿದೆ. ಈ ಒಂದು ಪಾರ್ಕನ್ನು ಸೈನಿಕರಿಗೆ ಹಾಗೂ ಅವರ ಕುಟುಂಬಗಳಿಗೆ ಅರ್ಪಿಸುವುದರ ಜೊತೆಗೆ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಸದಸ್ಯರು ಅಧಿಕಾರಿಗಳಿಗೆ ಈ ಸಂದರ್ಭ ಶ್ಲಾಘನೆ ವ್ಯಕ್ತಪಡಿಸುತ್ತೇನೆ ಎಂದು ಭರತ್‌ ಶೆಟ್ಟಿ ಹೇಳೀದರು.

ಶಾಸಕರಾದ ಡಾಕ್ಟರ್ ಭರತ್ ಶೆಟ್ಟಿ ವೈ. ಅಧ್ಯಕ್ಷತೆಯಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಸದಾಶಿವ ಉಳ್ಳಾಲ್‌, 42. 35 ಲಕ್ಷ ರೂಪಾಯಿ ವೆಚ್ಚದಲ್ಲಿ ಸೈನಿಕರನ್ನು ಸ್ಮರಿಸುವ ಪಾರ್ಕ್ ನಿರ್ಮಾಣಗೊಂಡಿದೆ. ಶಾಸಕರಾದ ಡಾಕ್ಟರ್ ಭರತ್ ಶೆಟ್ಟಿ ವೈ ಅವರು ತಮ್ಮ ಕ್ಷೇತ್ರದಾದ್ಯಂತ ಅತ್ಯುತ್ತಮವಾದ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಾ ಬರುತ್ತಿದ್ದು ಈ ಯೋಜನೆಯನ್ನು ಕೂಡ ಕಾರ್ಯಗತಗೊಳಿಸುವಲ್ಲಿ ಶ್ರಮಿಸಿದ್ದಾರೆ. ಮೂಡಾದ ಸದಸ್ಯರು ಅಧಿಕಾರಿಗಳು ಪಾಲಿಕೆಯ ಸದಸ್ಯರು ಅಧಿಕಾರಿಗಳ ಸಮನ್ವಯದೊಂದಿಗೆ ಉತ್ತಮವಾಗಿ ನಿರ್ಮಾಣಗೊಂಡಿದೆ ಎಂದು ಶ್ಲಾಘಿಸಿದರು.


ಈ ಸಂದರ್ಭದಲ್ಲಿ ಪ್ರಾಧಿಕಾರದ ಸದಸ್ಯರಾದ ನೀರಾಜ್ ಚಂದ್ರ ಪಾಲ್ ಅಬ್ದುಲ್ ಜಾಲೀಲ್, ಸುಮನ್ ದಾಸ್, ಸಬಿತಾ ಮಿಸ್ಕಿತ್, ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತಾರಾದ ಮೊಹಮ್ಮದ್ ನಜೀರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅಶ್ವಿನಿ, ಸಹಾಯಕ ಅಭಿಯಂತರರಾದ ಅಕ್ಬರ್ ಭಾಷಾ, ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಮನೋಜ್ ಕುಮಾರ್ ಕಿರಣ್ ಕುಮಾರ್ ಕೊಡಿಕಲ್, ರಂಜಿನಿ ಕೋಟ್ಯಾನ್, ಬಿಜೆಪಿ ಮುಖಂಡರಾದ ಸಿತೇಶ್ ಕೊಂಡೆ, ಆಶ್ರಿತ್‌ ನೋಂಡ, ಹರಿಪ್ರಸಾದ್ ಶೆಟ್ಟಿ, ಉಮೇಶ್ ಮಾಲರಾಯಸಾನ, ಸಂಜಿತ್ ಶೆಟ್ಟಿ, ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

 

error: Content is protected !!