ಫೋಟೋ ತೆಗೆದುಕೊಳ್ಳೋಕೆ ಹೋಗಿ ಕಾವೇರಿ ನದಿಗೆ ಜಾರಿ ಬಿದ್ದ ವ್ಯಕ್ತಿ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ಫೋಟೋ ತೆದುಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋದ ಘಟನೆ ನಡೆದಿದೆ.

ಮೈಸೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ( 36) ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ.

ಭಾನುವಾರ ಸಂಜೆ ಮಹೇಶ್‌ ಸ್ನೇಹಿತರೊಂದಿಗೆ ಕೆಆರ್‌ಎಸ್ ಭಾಗಕ್ಕೆ ಪಿಕ್ನಿಕ್‌ ಬಂದಿದ್ದ ವೇಳೆ ಸರ್ವಧರ್ಮ ಆಶ್ರಮದ ಫೋಟೋ ತೆಗೆದುಕೊಳ್ಳಲು ಹೋದಾಗ ಈ ಘಟನೆ ನಡೆದಿದ್ದು ಆಯತಪ್ಪಿ ಕಾವೇರಿ ನದಿಗೆ ಬಿದ್ದಿದ್ದಾರೆ. ನದಿಯಲ್ಲಿ ನೀರು ಹೆಚ್ಚಿದ್ದ ಕಾರಣ ಮಹೇಶ್‌ ಕೊಚ್ಚಿ ಹೋಗಿದ್ದಾರೆ.

ನದಿ ನೀರಲ್ಲಿ ಕೊಚ್ಚಿ ಹೋದ ಮಹೇಶ್‌ ಪತ್ತೆಗಾಗಿ ಅಗ್ನಿಶಾಮಕ ದಳ ಶೋಧ ಕಾರ್ಯ ನಡೆಸುತ್ತಿದ್ದು, ಕೆಆರ್‌ಎಸ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/FxkiqQfrxlV57ZfFGy2ssw?mode=r_t

error: Content is protected !!