ಪುಣೆಯ ರೈಲ್ವೆ ನಿಲ್ದಾಣದಲ್ಲಿರುವ ಗಾಂಧೀಜಿ ಪ್ರತಿಮೆಯ ಧ್ವಂಸಕ್ಕೆ ಯತ್ನಿಸಿದ ವ್ಯಕ್ತಿಯ ಬಂಧನ

ಪುಣೆ: ನಗರದ ರೈಲ್ವೆ ನಿಲ್ದಾಣದಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ಅಪವಿತ್ರಗೊಳಿಸಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತ ಮಾನಸಿಕ ಅಸ್ವಸ್ಥ ಎಂದು ಶಂಕಿಸಲಾಗಿದೆ. ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.

ಆರೋಪಿಯನ್ನು ಸೂರಜ್ ಶುಕ್ಲಾ ಎಂದು ಗುರುತಿಸಲಾಗಿದ್ದು, ಆತ ಉತ್ತರ ಪ್ರದೇಶದ ವಾರಣಾಸಿ ಮೂಲದವನೆಂದು ಉಪ ಪೊಲೀಸ್ ಆಯುಕ್ತ (ವಲಯ 2) ಮಿಲಿಂದ್ ಮೋಹಿತೆ ತಿಳಿಸಿದ್ದಾರೆ. “ಮಾನಸಿಕವಾಗಿ ಅಸ್ವಸ್ಥನಾಗಿ ಕಾಣುತ್ತಿದ್ದ ಆ ವ್ಯಕ್ತಿಯ ಚೀಲದಲ್ಲಿ ಕೆಲವು ಧಾರ್ಮಿಕ ಪುಸ್ತಕಗಳು ಮತ್ತು ಕೈಯಲ್ಲಿ ಬಿಲ್‌ಹುಕ್ ಇತ್ತು ಮತ್ತು ಹರಿತವಾದ ಆಯುಧವನ್ನು ಬಳಸಿ ಪ್ರತಿಮೆಯನ್ನು ಅಪವಿತ್ರಗೊಳಿಸಲು ಪ್ರಯತ್ನಿಸುತ್ತಿದ್ದ. ಆದರೆ, ಸುತ್ತಮುತ್ತಲಿನ ಜನರು ಅವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು” ಎಂದು ಮೋಹಿತೆ ಹೇಳಿದ್ದಾರೆ.

ಆರೋಪಿಯು ಪುಣೆಯ ವಿಶ್ರಾಂತವಾಡಿ ಪ್ರದೇಶದಲ್ಲಿ ವಾಸಿಸುತ್ತಿದ್ದು, ʼರುದ್ರಾಕ್ಷ’ (ಪವಿತ್ರ ಮಣಿಗಳು) ಮಾರಾಟ ಮಾಡುತ್ತಾನೆ. ಅವನು ಸತಾರಾ ಜಿಲ್ಲೆಯ ವಾಯ್‌ನಿಂದ ಹರಿತವಾದ ಆಯುಧವನ್ನು ಖರೀದಿಸಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ. ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅರವಿಂದ್ ಶಿಂಧೆ, ಆ ವ್ಯಕ್ತಿ ಪ್ರತಿಮೆಯ ಪೀಠವನ್ನು ಹತ್ತಿ ಅದನ್ನು ಅಪವಿತ್ರಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆಯನ್ನು ಖಂಡಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದ್ದಾರೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/FxkiqQfrxlV57ZfFGy2ssw?mode=r_t

error: Content is protected !!