ಸ್ಮೃತಿ ಇರಾನಿ ಮತ್ತೆ ಕಿರುತೆರೆಗೆ ಎಂಟ್ರಿ!

ಮುಂಬಯಿ: ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಹು ಸಮಯದ ಬಳಿಕ ಮತ್ತೆ ಕಿರುತೆರೆಗೆ ಕಂಬ್ಯಾಕ್‌ ಮಾಡಲಿದ್ದಾರೆ. ಸ್ಮೃತಿ ಇರಾನಿ ಒಂದು ಕಾಲದದಲ್ಲಿ ಕಿರುತೆರೆ – ಹಿರಿತೆರೆಯಲ್ಲಿ ಮಿಂಚಿದವರು.


2000 ಇಸವಿಯ ಆರಂಭದಲ್ಲಿ ʼಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ’ ಎನ್ನುವ ಧಾರಾವಾಹಿಯಲ್ಲಿ ಸ್ಮೃತಿ ಅವರು ಪ್ರಧಾನ ಪಾತ್ರದಲ್ಲಿ ನಟಿಸಿದ್ದರು. ತುಳಸಿ ವೀರ್ವಾನಿ ಪಾತ್ರದಲ್ಲಿ ಸ್ಮೃತಿ ವೀಕ್ಷಕರನ್ನು ರಂಜಿಸಿದ್ದರು. ಅವರ ಅಭಿನಯ ಕಿರುತೆರೆ ವೀಕ್ಷಕರ ಗಮನ ಸೆಳೆದಿತ್ತು. ʼಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ’ ಧಾರಾವಾಹಿ ಸತತ 7 ವರ್ಷ ನಂ.1 ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ಅಪಾರ ಜನಪ್ರಿಯತೆಯನ್ನು ಪಡೆದುಕೊಂಡಿತ್ತು.

2008ರ ನವೆಂಬರ್‌ನಲ್ಲಿ ಧಾರಾವಾಹಿ ಮುಕ್ತಾಯ ಕಂಡಿತ್ತು. ಇದೀಗ ಸ್ಮೃತಿ ಸೀರಿಯಲ್ ಜಗತ್ತಿಗೆ ರೀ ಎಂಟ್ರಿ ಕೊಟ್ಟಿದ್ದಾರೆ. ʼಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ ಸೀಸನ್‌ -2ʼ (Kyunki Saas Bhi Kabhi Bahu Thi 2) ಮೂಲಕ ಸ್ಮೃತಿ ಕಿರುತೆರೆಗೆ ಕಂಬ್ಯಾಕ್‌ ಮಾಡಲಿದ್ದಾರೆ. ʼಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ ಸೀಸನ್‌ -2ʼ ಈಗಾಗಲೇ ಕಿರುತೆರೆ ಲೋಕದಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಸ್ಮೃತಿ ಇರಾನಿ ಮತ್ತೆ ಟಿವಿ ಲೋಕಕ್ಕೆ ಬಂದಿದ್ದು, ಅವರನ್ನು ತುಳಸಿ ವೀರ್ವಾನಿ ಪಾತ್ರದಲ್ಲಿ ನೋಡಲು ವೀಕ್ಷಕರು ಕಾಯುತ್ತಿದ್ದಾರೆ.

ಈ ನಡುವೆ ಸ್ಮೃತಿ ಇರಾನಿ ಪಾತ್ರದ ಫಸ್ಟ್‌ ಲುಕ್‌ ರಿವೀಲ್‌ ಆಗಿದೆ. ಸಾಂಪ್ರದಾಯಿಕ ಗೃಹಿಣಿಯ ಲುಕ್‌ನಲ್ಲಿ ಅವರು ಕಾಣಿಸಿಕೊಂಡಿದ್ದು, ಕೆಂಪು ಬಿಂದಿ, ಕಪ್ಪು ಮಣಿಗಳ ಮಂಗಳಸೂತ್ರದಿಂದ ಲೇಯರ್ ಮಾಡಲಾದ ಆಭರಣಗಳಲ್ಲಿ ಅವರು ಮಿಂಚಿದ್ದಾರೆ. ಅವರ ಪಾತ್ರ ಲುಕ್‌ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸೆಟ್‌ನಲ್ಲಿನ ಕೆಲ ಬದಲಾವಣೆ ಕೆಲಸದಿಂದಾಗಿ ಧಾರಾವಾಹಿ ಆರಂಭ ಸ್ವಲ್ಪ ವಿಳಂಬವಾಗಲಿದೆ ಎನ್ನಲಾಗಿದೆ. ಏಕ್ತಾ ಕಪೂರ್‌ ತನ್ನ ಬ್ಯಾನರ್‌ ಅಡಿಯಲ್ಲಿ ಈ ಧಾರಾವಾಹಿಯನ್ನು ನಿರ್ಮಾಣ ಮಾಡಲಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

 

error: Content is protected !!